Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:15 - ಕನ್ನಡ ಸತ್ಯವೇದವು C.L. Bible (BSI)

15 ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ವಿುಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಹಾಗೆ ಹೇಳುವುದನ್ನು ಮುಗಿಸುವುದಕ್ಕಿಂತ ಮುಂಚೆ ಅಬ್ರಹಾಮನ ಸಹೋದರನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಾಳ ಮಗ ಬೆತೂಯೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲೆ ಇಟ್ಟುಕೊಂಡು ಹೊರಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:15
22 ತಿಳಿವುಗಳ ಹೋಲಿಕೆ  

ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಅದರಂತೆಯೇ ರೂತಳು ಸಾಯಂಕಾಲದವರೆಗೆ ತೆನೆಗಳನ್ನು ಆಯ್ದುಕೊಂಡಳು. ಅವನ್ನು ಬಡಿದಾಗ ಸುಮಾರು ಅರ್ಧ ಚೀಲದಷ್ಟು ಜವೆಗೋದಿ ಸಿಕ್ಕಿತು.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು.


ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು.


ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.


ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.


“ನಾಹೋರನ ಮಗ-ಲಾಬಾನರನ್ನು ಬಲ್ಲಿರಾ?’ ಎಂದು ಕೇಳಿದ್ದಕ್ಕೆ “ಬಲ್ಲೆವು” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು