Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:17 - ಕನ್ನಡ ಸತ್ಯವೇದವು C.L. Bible (BSI)

17 ಆ ಸೇವಕನು ಅವಳಿಗೆದುರಾಗಿ ಓಡಿಬಂದು, “ಅಮ್ಮಾ, ದಯಮಾಡಿ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಸೇವಕನು ಓಡಿಬಂದು ಎದುರುಗೊಂಡು - ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸೇವಕನು ಅವಳೆದುರಿಗೆ ಓಡಿಹೋಗಿ, “ನಿನ್ನ ಕೊಡದೊಳಗಿಂದ ಸ್ವಲ್ಪ ನೀರು ನನಗೆ ಕುಡಿಯುವುದಕ್ಕೆ ಕೊಡು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:17
10 ತಿಳಿವುಗಳ ಹೋಲಿಕೆ  

ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.


“ಬಾಯಾರಿದವರಿಗೆ ನೀರನ್ನು ಕೊಡಿ. ತೇಮಾ ನಾಡಿನ ನಿವಾಸಿಗಳೇ, ವಲಸೆ ಬಂದವರಿಗೆ ಉಣಲು ಕೊಡಿ.


ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.


ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.


ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು