Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:2 - ಕನ್ನಡ ಸತ್ಯವೇದವು C.L. Bible (BSI)

2 ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:2
14 ತಿಳಿವುಗಳ ಹೋಲಿಕೆ  

ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು.


ತರುವಾಯ ಜೋಸೆಫನು ತನ್ನ ಗೃಹನಿರ್ವಾಹಕನನ್ನು ಕರೆದು, “ಆ ಜನರ ಗೋಣಿಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಿಯಲ್ಲಿ ಅವನವನ ಹಣದ ಗಂಟನ್ನಿಡು.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಅವನು, “ನಾನು ಅಬ್ರಹಾಮನ ಸೇವಕ.


ಅವರು ನನಗೆ, 'ನಾನು ವಾಸವಾಗಿರುವ ಕಾನಾನ್ ನಾಡಿನಿಂದ ನನ್ನ ಮಗನಿಗೆ ಹೆಣ್ಣನ್ನು ತರಬೇಡ;


ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.


ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.


ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು