Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:22 - ಕನ್ನಡ ಸತ್ಯವೇದವು C.L. Bible (BSI)

22 ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಒಂಟೆಗಳು ಕುಡಿದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಆಕೆಯ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಇಟ್ಟು - ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:22
16 ತಿಳಿವುಗಳ ಹೋಲಿಕೆ  

ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ನೀನು ಯಾರ ಮಗಳೆಂದು ಕೇಳಿದ್ದಕ್ಕೆ, 'ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅದನ್ನು ಕೇಳಿ ನಾನು ಆಕೆಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ತೊಡಿಸಿ,


ಅವನು ತನ್ನ ತಂಗಿಯ ಮೇಲಿದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿದನು. ಆ ಮನುಷ್ಯ ಆಕೆಗೆ ಹೇಳಿದ ಮಾತುಗಳನ್ನು ಆಕೆಯಿಂದಲೇ ಕೇಳಿ ತಿಳಿದುಕೊಂಡನು. ಬಳಿಕ ಬುಗ್ಗೆಯ ಬಳಿ ಒಂಟೆಗಳೊಂದಿಗೆ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.


ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


"ನೀನು ಯಾರ ಮಗಳು? ದಯವಿಟ್ಟು ಹೇಳು; ನಿನ್ನ ತಂದೆಯ ಮನೆಯಲ್ಲಿ ತಂಗುವುದಕ್ಕೆ ಸ್ಥಳವಿದೆಯೇ?” ಎಂದು ಕೇಳಿದನು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ನನ್ನ ಚಿಕ್ಕಪ್ಪನ ಮಗ ಹನಮೇಲನಿಂದ ಅನಾತೋತಿನಲ್ಲಿರುವ ಆ ಹೊಲವನ್ನು ಕೊಂಡುಕೊಂಡೆ. ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆ.


“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು