Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:27 - ಕನ್ನಡ ಸತ್ಯವೇದವು C.L. Bible (BSI)

27 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:27
31 ತಿಳಿವುಗಳ ಹೋಲಿಕೆ  

ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!


“ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ!


“ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಸ್ತುತಿಯಾಗಲಿ ನಮ್ಮನುದ್ಧರಿಸುವಾ ದೇವನಿಗೆ I ನಮ್ಮನನುದಿನ ಬಿಡದೆ ಸಹಿಸಿಕೊಳ್ಳುವಾ ಪ್ರಭುವಿಗೆ II


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಮಾರನೆಯ ದಿನ ಕೂಡ ಮೋಶೆ ಹೊರಗೆ ಹೋಗಿ ನೋಡಿದನು. ಈ ಸಾರಿ ಇಬ್ಬರು ಹಿಬ್ರಿಯರೇ ಜಗಳವಾಡುತ್ತಿದ್ದರು. ತಪ್ಪಿತಸ್ಥನಿಗೆ, “ಏನಯ್ಯಾ ಸ್ವಕುಲದವನನ್ನೇ ಹೊಡೆಯುತ್ತಿರುವೆ ಏಕೆ?” ಎಂದು ಕೇಳಿದನು.


ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.


“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ


ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.


ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


"ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು