Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:40 - ಕನ್ನಡ ಸತ್ಯವೇದವು C.L. Bible (BSI)

40 ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವನು ನನಗೆ - ನಾನು ಯೆಹೋವನಿಗೆ ನಡೆದುಕೊಳ್ಳುತ್ತೇನಲ್ಲಾ; ಆತನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:40
20 ತಿಳಿವುಗಳ ಹೋಲಿಕೆ  

“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು