Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:45 - ಕನ್ನಡ ಸತ್ಯವೇದವು C.L. Bible (BSI)

45 ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಾನು ಹೀಗೆ ಮನಸ್ಸಿನೊಳಗೆ ಮಾತಾಡಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವದನ್ನು ಕಂಡೆನು. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ - ನನಗೆ ನೀರನ್ನು ಕುಡಿಯುವದಕ್ಕೆ ಕೊಡಬೇಕಮ್ಮಾ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ನಾನು ನನ್ನ ಹೃದಯದಲ್ಲಿ ಹಾಗೆ ಅಂದುಕೊಂಡು ಮುಗಿಸುವುದರೊಳಗಾಗಿ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಹೊರಗೆ ಬಂದಳು. ಆಕೆಯು ಬಾವಿಯಿಂದ ನೀರನ್ನು ಸೇದಿದಳು. ಆಗ ನಾನು, ‘ನನಗೆ ಕುಡಿಯುವುದಕ್ಕೆ ಕೊಡು,’ ಎಂದು ಆಕೆಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:45
14 ತಿಳಿವುಗಳ ಹೋಲಿಕೆ  

ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.


"ಕುಡಿಯಪ್ಪಾ, ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ’ ಎನ್ನುವಳೋ ಅವಳೇ ಸರ್ವೇಶ್ವರ ಸ್ವಾಮಿಯಿಂದ ನನ್ನೊಡೆಯನ ಮಗನಿಗೆ ಚುನಾಯಿತಳಾದ ಕನ್ನಿಕೆಯಾಗಿರಲಿ' ಎಂದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು