ಆದಿಕಾಂಡ 24:48 - ಕನ್ನಡ ಸತ್ಯವೇದವು C.L. Bible (BSI)48 ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ನೀಟಾದ ದಾರಿಯಲ್ಲಿ ಕರೆದುಕೊಂಡು ಬಂದದ್ದಕ್ಕಾಗಿ ಆತನನ್ನು ಕೊಂಡಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ತಲೆಬಾಗಿ ಯೆಹೋವ ದೇವರನ್ನು ಆರಾಧಿಸಿ, ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕೆ ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರನ್ನು ಕೊಂಡಾಡಿದೆ. ಅಧ್ಯಾಯವನ್ನು ನೋಡಿ |