Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:50 - ಕನ್ನಡ ಸತ್ಯವೇದವು C.L. Bible (BSI)

50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅದಕ್ಕೆ ಲಾಬಾನನು ಬೆತೂವೇಲನೂ - ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:50
15 ತಿಳಿವುಗಳ ಹೋಲಿಕೆ  

ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


ಅದಕ್ಕೆ ರೆಬೆಕ್ಕಳ ಅಣ್ಣ ಹಾಗು ತಾಯಿ, “ಹುಡುಗಿ ಇನ್ನೂ ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು,” ಎಂದು ಹೇಳಿದರು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ಆ ಹುಡುಗಿ ಓಡಿಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯಲ್ಲಿದ್ದ ಎಲ್ಲರಿಗೂ ತಿಳಿಸಿದಳು.


ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ರೆಬೆಕ್ಕಳನ್ನು ಇಗೋ ನಿನ್ನ ವಶಕ್ಕೆ ಒಪ್ಪಿಸುತ್ತಿದ್ದೇವೆ; ಕರೆದುಕೊಂಡು ಹೋಗಬಹುದು. ಸರ್ವೇಶ್ವರ ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಪತ್ನಿ ಆಗಲಿ,” ಎಂದರು.


ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು