Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:53 - ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:53
11 ತಿಳಿವುಗಳ ಹೋಲಿಕೆ  

ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಮೋಶೆ ಹೇಳಿಕೊಟ್ಟ ಹಾಗೆ ಈಜಿಪ್ಟಿನವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಗಳನ್ನು ಕೇಳಿಕೊಂಡರು.


ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು.


ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.


ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.


ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.


ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.


ಇವರ ತಂದೆ ಇವರಿಗೆ ಜುದೇಯದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಲ್ಲದೆ, ಬೆಳ್ಳಿಬಂಗಾರ, ಅಮೂಲ್ಯ ವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು