Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:63 - ಕನ್ನಡ ಸತ್ಯವೇದವು C.L. Bible (BSI)

63 ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಅವನು ಸಂಜೇವೇಳೆಯಲ್ಲಿ ಧ್ಯಾನಮಾಡುವದಕ್ಕೋಸ್ಕರ ಅಡವಿಗೆ ಹೋಗಿದ್ದಾಗ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಇಸಾಕನು ಸಾಯಂಕಾಲ ಹೊಲದಲ್ಲಿ ಧ್ಯಾನಮಾಡುವುದಕ್ಕೆ ಹೋದಾಗ, ಕಣ್ಣೆತ್ತಿ ನೋಡಲು, ಒಂಟೆಗಳು ಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:63
12 ತಿಳಿವುಗಳ ಹೋಲಿಕೆ  

ನನಗಿದೆ ನಿನ್ನ ನಿಯಮಗಳ ಧ್ಯಾನ I ನಿನ್ನ ಮಾರ್ಗಗಳಲ್ಲಿ ಗಾಢ ಗಮನ II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II


ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ರೆಬೆಕ್ಕಳೂ ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗಿಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು