Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:65 - ಕನ್ನಡ ಸತ್ಯವೇದವು C.L. Bible (BSI)

65 “ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:65
9 ತಿಳಿವುಗಳ ಹೋಲಿಕೆ  

ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.


ಹೀಗೆ ದೇವದೂತರ ಸಲುವಾಗಿಯಾದರೂ ಸ್ತ್ರೀಯು ಗೌರವ ಸೂಚಿಸಲು ಮುಸುಕನ್ನು ಹಾಕಬೇಕು.


ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”


ರೆಬೆಕ್ಕಳೂ ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗಿಳಿದಳು.


ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲ ಇಸಾಕನಿಗೆ ವರದಿ ಮಾಡಿದನು.


ಆಗ ಆಕೆ, ‘ಶೇಲಹನು ಪ್ರಾಯಸ್ಥನಾಗಿದ್ದರೂ ನನ್ನನ್ನು ಅವನಿಗೆ ಮದುವೆ ಮಾಡಿಕೊಡಲಿಲ್ಲವಲ್ಲಾ’ ಎಂದುಕೊಂಡು ತನ್ನ ವಿಧವೆ ವಸ್ತ್ರಗಳನ್ನು ತೆಗೆದಿಟ್ಟಳು. ಮುಸುಕನ್ನು ಹಾಕಿಕೊಂಡು ತನ್ನನ್ನೇ ಮರೆಸಿಕೊಂಡಳು. ತಿಮ್ನಾ ಊರಿನ ದಾರಿಯಲ್ಲಿ ಇರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲೆ ಕುಳಿತುಕೊಂಡಳು.


ಬೀಸುವ ಕಲ್ಲನು ಹಿಡಿ, ಹಿಟ್ಟಿಗಾಗಿ ನೆರಿಗೆಯನ್ನು ಹರಿ, ಮುಸುಕನ್ನು ತೆಗೆದುಹಾಕಿ ಹೊಳೆಗಳನ್ನು ಹಾದುಹೋಗು, ನಡೆ ಬರೆಗಾಲಿನಲ್ಲಿ.


ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು