Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:7
39 ತಿಳಿವುಗಳ ಹೋಲಿಕೆ  

ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.


ಪರಲೋಕದಲ್ಲಿರುವ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು