Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:11 - ಕನ್ನಡ ಸತ್ಯವೇದವು C.L. Bible (BSI)

11 ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಬ್ರಹಾಮನು ತೀರಿಹೋದನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನಿಗೂ ಉಂಟಾಯಿತು. ಇಸಾಕನು ಲಹೈರೋಯಿ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಬ್ರಹಾಮನು ಸತ್ತ ನಂತರ ದೇವರು ಅವನ ಮಗ ಇಸಾಕನನ್ನು ಆಶೀರ್ವದಿಸಿದರು. ಇಸಾಕನು ಬೇರ್ ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:11
11 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ಈ ಕಾರಣ ಅಲ್ಲಿದ್ದ ಬಾವಿಗೆ “ಲಹೈರೋಯಿ” (ನನ್ನನ್ನು ನೋಡುವ ಜೀವಸ್ವರೂಪನ ಬಾವಿ) ಎಂದು ಹೆಸರಾಯಿತು.


ಇತ್ತ ಇಸಾಕನು ‘ಲಹೈರೋಯಿ’ ಎಂಬಲ್ಲಿಗೆ ಹೋಗಿ ಬಂದು ಕಾನಾನ್ ನಾಡಿನ ದಕ್ಷಿಣ ಪ್ರಾಂತದಲ್ಲಿ ವಾಸಮಾಡುತ್ತಿದ್ದನು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು