Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:18 - ಕನ್ನಡ ಸತ್ಯವೇದವು C.L. Bible (BSI)

18 ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರಿಗೆ ತಮ್ಮ ಸಂಬಂಧಿಕರ ಎದುರಿನಲ್ಲಿಯೇ ವಾಸಸ್ಥಳ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:18
17 ತಿಳಿವುಗಳ ಹೋಲಿಕೆ  

ಬಾಳುವವನು ಕಾಡುಗತ್ತೆಯಂತೆ ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರು ಬದುರಾಗೆ.”


ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.


ಬಲಿಯಾದರವರ ಯಾಜಕರು ಶತ್ರುಕತ್ತಿಗೆ I ವಿಧವೆಯರು ರೋದಿಸಲಿಲ್ಲ ಅವರ ಸಾವಿಗೆ II


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.


ಪಾರಾನಿನ ಅರಣ್ಯ ಅವನ ವಾಸಸ್ಥಳವಾಯಿತು. ಅವನ ತಾಯಿ ಈಜಿಪ್ಟಿನಿಂದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.


ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಓಫೀರ್, ಹವೀಲ, ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲ ಯೋಕ್ತಾನನಿಂದ ಹುಟ್ಟಿದವು.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.


ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು