Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:2 - ಕನ್ನಡ ಸತ್ಯವೇದವು C.L. Bible (BSI)

2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:2
16 ತಿಳಿವುಗಳ ಹೋಲಿಕೆ  

ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;


ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


“ಮಿದ್ಯಾನರು ಇಸ್ರಯೇಲರಿಗೆ ಮಾಡಿದ ಹಿಂಸೆಗಾಗಿ ನೀನು ಮುಯ್ಯಿತೀರಿಸಬೇಕು. ಅನಂತರ ನಿನ್ನ ಪೂರ್ವಜರ ಬಳಿಗೆ ನೀನು ಸೇರಬೇಕು,” ಎಂದರು.


ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಹುಷಾಮನು ಸತ್ತ ಮೇಲೆ ಮೊವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.


ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.


ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.


ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು