Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:21 - ಕನ್ನಡ ಸತ್ಯವೇದವು C.L. Bible (BSI)

21 ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:21
24 ತಿಳಿವುಗಳ ಹೋಲಿಕೆ  

ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಸಾರಯಳು ಬಂಜೆ, ಆಕೆಗೆ ಮಕ್ಕಳಿರಲಿಲ್ಲ.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಒಬ್ಬಳು ಹನ್ನ. ಇನ್ನೊಬ್ಬಳು ಪೆನಿನ್ನ. ಪೆನಿನ್ನಗೆ ಮಕ್ಕಳು ಇದ್ದರು; ಆದರೆ ಹನ್ನಳಿಗೆ ಇರಲಿಲ್ಲ.


ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.


ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು