Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:22 - ಕನ್ನಡ ಸತ್ಯವೇದವು C.L. Bible (BSI)

22 ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು - ಹೀಗಾದರೆ ನಾನು ಯಾಕೆ ಬದುಕಬೇಕು ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:22
7 ತಿಳಿವುಗಳ ಹೋಲಿಕೆ  

(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.


ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು