Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:23
33 ತಿಳಿವುಗಳ ಹೋಲಿಕೆ  

ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:


ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು.


ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,


ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


ದಿನ ತುಂಬಿದಾಗ ರೆಬೆಕ್ಕಳು ಅವಳಿ ಮಕ್ಕಳನ್ನು ಹೆತ್ತಳು.


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


“ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ದಾವೀದನೆ ಎಲ್ಲರಿಗಿಂತ ಕಿರಿಯವನು. ಮೂರು ಮಂದಿ ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದುದರಿಂದ


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು