ಆದಿಕಾಂಡ 25:26 - ಕನ್ನಡ ಸತ್ಯವೇದವು C.L. Bible (BSI)26 ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿ |