Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:31 - ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಯಕೋಬ, ‘ನಿನ್ನದಾಗಿರುವ ಜ್ಯೇಷ್ಠಪುತ್ರನ ಹಕ್ಕನ್ನು ನನಗೆ ಮೊದಲು ಮಾರಿಬಿಡು,’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಕೋಬನು ಅವನಿಗೆ - ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿಬಿಡು ಅನ್ನಲು ಏಸಾವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:31
9 ತಿಳಿವುಗಳ ಹೋಲಿಕೆ  

‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ಏಸಾವನು, ‘ಆಗಲಿ, ಮಾರುತ್ತೇನೆ, ಸಾಯುತ್ತಿರುವ ನನಗೆ ಜ್ಯೇಷ್ಠತನದಿಂದ ಪ್ರಯೋನಜವೇನು? ಎಂದ.


ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು