Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:6 - ಕನ್ನಡ ಸತ್ಯವೇದವು C.L. Bible (BSI)

6 ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:6
18 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.


ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.


ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.


ಲೇಯಳು ತನಗೆ ಹೆರಿಗೆ ನಿಂತುಹೋಗಿ ಇರುವುದನ್ನು ತಿಳಿದು ತನ್ನ ದಾಸಿ ಜಿಲ್ಪಳನ್ನು ಯಕೋಬನಿಗೆ ಹೆಂಡತಿಯಾಗಿ ಒಪ್ಪಿಸಿದಳು.


ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು.


ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.


ಬಳಿಕ ಯಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಮೂಡಣದವರ ನಾಡಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು