Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:8 - ಕನ್ನಡ ಸತ್ಯವೇದವು C.L. Bible (BSI)

8 ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:8
27 ತಿಳಿವುಗಳ ಹೋಲಿಕೆ  

ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.


ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ಹಣ್ಣು ಹಣ್ಣು ಮುದುಕನಾಗಿ ಸತ್ತನು.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು.


ಅಬ್ರಹಾಮನು ನೂರೆಪ್ಪತ್ತೈದು ವರ್ಷ ಬದುಕಿದ್ದನು.


ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.


ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.


ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.


ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು. ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು.


ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು