Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:12 - ಕನ್ನಡ ಸತ್ಯವೇದವು C.L. Bible (BSI)

12 ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:12
18 ತಿಳಿವುಗಳ ಹೋಲಿಕೆ  

ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”


ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.


ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಅಬ್ರಹಾಮನು ಆಗ ತುಂಬು ವಯಸ್ಸಿನ ಮುದುಕ. ಸರ್ವೇಶ್ವರ ಸ್ವಾಮಿ ಅವನ ಎಲ್ಲ ಕೆಲಸಕಾರ್ಯಗಳನ್ನು ಆಶೀರ್ವದಿಸಿದ್ದರು.


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.


ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II


ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು