Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:14 - ಕನ್ನಡ ಸತ್ಯವೇದವು C.L. Bible (BSI)

14 ಅವನಿಗೆ ದನಕುರಿಗಳೂ ಆಳುಕಾಳುಗಳೂ ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನಿಗೆ ದನಕುರಿಗಳ ಸಂಪತ್ತೂ ಅನೇಕ ಸೇವಕಜನವೂ ಇದ್ದವು. ಇದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡುಗಳೂ ಬಹಳ ಮಂದಿ ಸೇವಕರೂ ಇದ್ದರು. ಆದ್ದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:14
16 ತಿಳಿವುಗಳ ಹೋಲಿಕೆ  

ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಅಬ್ರಹಾಮನು ತನಗಿದ್ದ ಆಸ್ತಿಪಾಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.


ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು