Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:22 - ಕನ್ನಡ ಸತ್ಯವೇದವು C.L. Bible (BSI)

22 ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು, “ಈಗ ಯೆಹೋವ ದೇವರು ನಮಗೆ ಸ್ಥಳವನ್ನು ಮಾಡಿದ್ದಾರೆ. ನಾವು ಈ ದೇಶದಲ್ಲಿ ಅಭಿವೃದ್ಧಿ ಹೊಂದುವೆವು,” ಎಂದು ಹೇಳಿ ಅದಕ್ಕೆ, ರೆಹೋಬೋತ್, ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:22
11 ತಿಳಿವುಗಳ ಹೋಲಿಕೆ  

ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು.


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದರು. ಆ ನಾಡಿಗರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅದಕ್ಕೆ ‘ಸಿಟ್ನಾ’ ಎಂದು ಹೆಸರಿಟ್ಟನು.


ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು