Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:25 - ಕನ್ನಡ ಸತ್ಯವೇದವು C.L. Bible (BSI)

25 ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:25
11 ತಿಳಿವುಗಳ ಹೋಲಿಕೆ  

ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.


ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.


ಅದೇ ದಿನ ಇಸಾಕನ ಕೆಲಸಗಾರರು ತಾವು ತೋಡಿದ್ದ ಬಾವಿಯ ಸಮಾಚಾರದೊಂದಿಗೆ ಬಂದು, “ನಮಗೆ ನೀರು ಸಿಕ್ಕಿತು,” ಎಂದು ವರದಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು