Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:28 - ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಅವರು, “ನಿಶ್ಚಯವಾಗಿ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ ಎಂದು ತಿಳಿದು, ನಮಗೂ, ನಿನಗೂ ಮಧ್ಯದಲ್ಲಿ ಒಂದು ಪ್ರಮಾಣವಿರುವ ಹಾಗೆ, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳೋಣವೆಂದು ನಾವು ತೀರ್ಮಾನಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:28
21 ತಿಳಿವುಗಳ ಹೋಲಿಕೆ  

ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಬೇಕಾದರೆ - ನೀನು ನನ್ನ ಜನರ ಬಳಿಗೆ ಹೋಗಬೇಕು, ಅವರು ಹೆಣ್ಣನ್ನು ಕೊಡುವುದಿಲ್ಲ ಎನ್ನಬೇಕು. ಆಗ ಮಾತ್ರ ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ;’ ಎಂದು ಹೇಳಿದರು.


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಬಾ, ನಾನೂ ನೀನೂ ಒಂದು ಒಪ್ಪಂದ ಮಾಡಿಕೊಳ್ಳೋಣ; ಅದು ನನಗೂ ನಿನಗೂ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.


ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು.


ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು