Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:29 - ಕನ್ನಡ ಸತ್ಯವೇದವು C.L. Bible (BSI)

29 ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದೇನೆಂದರೆ, ನಾವು ನಿನ್ನನ್ನು ಮುಟ್ಟದೆ, ನಿನಗೆ ಒಳ್ಳೆಯದನ್ನೇ ಮಾಡಿ, ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು. ಏಕೆಂದರೆ ನೀನು ಈಗ ಯೆಹೋವ ದೇವರಿಂದ ಆಶೀರ್ವಾದ ಹೊಂದಿರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:29
8 ತಿಳಿವುಗಳ ಹೋಲಿಕೆ  

“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು