Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:3 - ಕನ್ನಡ ಸತ್ಯವೇದವು C.L. Bible (BSI)

3 ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:3
42 ತಿಳಿವುಗಳ ಹೋಲಿಕೆ  

ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II


ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಅವನಿಗೆ ದನಕುರಿಗಳೂ ಆಳುಕಾಳುಗಳೂ ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.


ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು.


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು