Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಇಸಾಕನು ಅವರಿಗೆ ಔತಣವನ್ನು ಏರ್ಪಡಿಸಿದನು; ಅವರೆಲ್ಲರು ತಿಂದು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು; ಅವರೆಲ್ಲರೂ ಭೋಜನೋಪಚಾರಗಳನ್ನು ತೀರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:30
8 ತಿಳಿವುಗಳ ಹೋಲಿಕೆ  

ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.


ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು.


ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು