ಆದಿಕಾಂಡ 26:4 - ಕನ್ನಡ ಸತ್ಯವೇದವು C.L. Bible (BSI)4 ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು. ಅಧ್ಯಾಯವನ್ನು ನೋಡಿ |
ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.