Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:12 - ಕನ್ನಡ ಸತ್ಯವೇದವು C.L. Bible (BSI)

12 ಒಂದು ವೇಳೆ ತಂದೆ ನನ್ನನ್ನು ಮುಟ್ಟಿನೋಡಿಯಾರು; ನಾನು ಅವರಿಗೆ ವಂಚಕನಾಗಿ ತೋರಿಬಂದರೆ ಆಶೀರ್ವಾದಕ್ಕೆ ಬದಲಾಗಿ ಶಾಪ ಬರಮಾಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಗೇಲಿಮಾಡುವವನಾಗಿ ತೋರಿಬಂದು ನನ್ನ ಮೇಲೆ ಶಾಪವನ್ನು ಬರಮಾಡಿಕೊಳ್ಳುವೆನೇ ಹೊರತು ಆಶೀರ್ವಾದವನ್ನು ಬರಮಾಡಿಕೊಳ್ಳುವದಿಲ್ಲ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:12
11 ತಿಳಿವುಗಳ ಹೋಲಿಕೆ  

“ಅವರು, ‘ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.


ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,


ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು