Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಅವನ ತಾಯಿ, “ಮಗನೇ, ಅವರು ನಿನಗೆ ಶಾಪ ಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ತಾಯಿ - ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ತಾಯಿಯು ಅವನಿಗೆ, “ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ, ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ, ಅವುಗಳನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:13
12 ತಿಳಿವುಗಳ ಹೋಲಿಕೆ  

ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.


ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ಒಡೆಯಾ, ಅಪರಾಧವು ನನ್ನ ಮೇಲಿರಲಿ; ನಿಮ್ಮ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಆಲಿಸಬೇಕು;


ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.


ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನಾನು ಹೇಳುವಂತೆ ಮಾಡು:


ಯಕೋಬನು ‘ಮಾರಿರುವುದಾಗಿ ನನಗೆ ಪ್ರಮಾಣ ಮಾಡು’, ಎಂದಾಗ ಏಸಾವನು ಪ್ರಮಾಣಮಾಡಿ ತನ್ನ ಜ್ಯೇಷ್ಠತನದ ಹಕ್ಕನ್ನು ಮಾರಿಬಿಟ್ಟ.


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾದ ಸವಿ ಊಟವನ್ನು ಸಿದ್ಧಪಡಿಸಿದಳು.


ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು