Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:19 - ಕನ್ನಡ ಸತ್ಯವೇದವು C.L. Bible (BSI)

19 ಯಕೋಬನು, “ನಾನೇ ನಿಮ್ಮ ಹಿರಿಯ ಮಗ ಏಸಾವನು; ನಿಮ್ಮ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕುಳಿತುಕೊಂಡು ನಾನು ತಂದಿರುವ ಬೇಟೆಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕೋಬನು ಅವನಿಗೆ - ನಾನು ನಿನ್ನ ಹಿರೀ ಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕೂತುಕೊಂಡು ನಾನು ತಂದಿರುವ ಬೇಟೇ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಲು ಇಸಾಕನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಕೋಬನು ತನ್ನ ತಂದೆಗೆ, “ನಾನು ನಿನ್ನ ಹಿರಿಯ ಮಗ ಏಸಾವನು. ನೀನು ನನಗೆ ಹೇಳಿದಂತೆ ಮಾಡಿದ್ದೇನೆ, ಎದ್ದು ಕುಳಿತುಕೋ. ನೀನು ನನ್ನನ್ನು ಆಶೀರ್ವದಿಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:19
15 ತಿಳಿವುಗಳ ಹೋಲಿಕೆ  

ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.


ಆಗ ಇಸಾಕನು ಅವನಿಗೆ, “ಮಗನೇ, ಹತ್ತಿರಕ್ಕೆ ಬಾ; ನೀನು ನನ್ನ ಮಗನೋ ಅಲ್ಲವೋ, ಎಂದು ಮುಟ್ಟಿ ತಿಳಿದುಕೊಳ್ಳಬೇಕು,” ಎಂದನು.


ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ಮೊದಲು ಹುಟ್ಟಿದ ಮಗು ಕೆಂಚಗೂ ಮೈಯೆಲ್ಲ ರೋಮಮಯವಾಗೂ ಇತ್ತು. ಎಂತಲೇ ಅದಕ್ಕೆ ಏಸಾವ ಎಂದು ಹೆಸರಿಟ್ಟರು.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಇಸಾಕನಿಗೆ ಬೇಟೆಯ ಮಾಂಸ ಇಷ್ಟ; ಎಂದೇ ಏಸಾವನ ಮೇಲೆ ಹೆಚ್ಚು ಪ್ರೀತಿ. ರೆಬೆಕ್ಕಳಿಗಾದರೋ ಯಕೋಬನ ಮೇಲೆ ಹೆಚ್ಚು ಪ್ರೀತಿ.


ಯಕೋಬನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ತಂದೆಯು, “ಏನು ಮಗನೇ, ನೀನು ಯಾವ ಮಗನು?” ಎಂದು ಕೇಳಿದನು.


ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು.


ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು.


ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು