Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:24 - ಕನ್ನಡ ಸತ್ಯವೇದವು C.L. Bible (BSI)

24 ಆದರೂ ಮರಳಿ, “ನೀನು ನಿಶ್ಚಯವಾಗಿ ನನ್ನ ಮಗ ಏಸಾವನೋ” ಎಂದು ಕೇಳಿದನು. ಯಕೋಬನು “ಹೌದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು - ನೀನು ನಿಜವಾಗಿ ನನ್ನ ಮಗನಾದ ಏಸಾವನೋ ಎಂದು ಕೇಳಿದ್ದಕ್ಕೆ ಯಾಕೋಬನು - ಹೌದು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸಾಕನು ಅವನಿಗೆ, “ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ಹೌದು, ನಾನೇ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮತ್ತೆ ಅವನು, “ನೀನು ನನ್ನ ಮಗ ಏಸಾವನೋ?” ಎಂದಾಗ. ಯಾಕೋಬನು, “ನಾನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:24
16 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.


“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.


ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.


ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಕದಗಳ ಮೇಲೆ ಗೀಜುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.


ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಿದನು. ಆಕೆ, “ನಾನು ವಿಧವೆ; ಗಂಡನು ಸತ್ತುಹೋಗಿದ್ದಾನೆ.


ಯಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.


ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು