Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:27 - ಕನ್ನಡ ಸತ್ಯವೇದವು C.L. Bible (BSI)

27 ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಹತ್ತರ ಬಂದು ಅವನಿಗೆ ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ನೋಡಿದಾಗ ಅವನನ್ನು ಆಶೀರ್ವದಿಸಿ - ಆಹಾ, ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಅವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು: “ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:27
14 ತಿಳಿವುಗಳ ಹೋಲಿಕೆ  

ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.


ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ವಿಶ್ವಾಸವಿದ್ದುದರಿಂದಲೇ ಇಸಾಕನು ಸಹ ಮುಂದೆ ಸಂಭವಿಸಬೇಕಾದ್ದನ್ನು ಸೂಚಿಸಿ, ಯಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.


ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.


ತನ್ನ ಹಿರಿಯ ಮಗ ಏಸಾವನ ಬಟ್ಟೆಗಳಲ್ಲಿ ಶ್ರೇಷ್ಠವಾದವು ಮನೆಯಲ್ಲಿ ಆಕೆಯ ವಶದಲ್ಲಿದ್ದವು. ಅವುಗಳನ್ನು ತೆಗೆದು ಕಿರಿಯ ಮಗ ಯಕೋಬನಿಗೆ ತೊಡಿಸಿದಳು


ಬಳಿಕ ಅವನ ತಂದೆ ಇಸಾಕನು, “ಮಗನೇ, ಹತ್ತಿರ ಬಂದು ನನಗೆ ಮುತ್ತು ಕೊಡು,” ಎಂದನು. ಅವನು ಹತ್ತಿರ ಬಂದು ಮುದ್ದಿಟ್ಟಾಗ


ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;


ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು