Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:29 - ಕನ್ನಡ ಸತ್ಯವೇದವು C.L. Bible (BSI)

29 ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:29
40 ತಿಳಿವುಗಳ ಹೋಲಿಕೆ  

ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ದೇವರೇ ಶಪಿಸಿಲ್ಲದವರನ್ನು ನಾನೇನೆಂತು ಶಪಿಸಲಿ? ಸರ್ವೇಶ್ವರನೇ ಧಿಕ್ಕರಿಸಿಲ್ಲದವರನ್ನು ನಾನೇನೆಂತು ಧಿಕ್ಕರಿಸಲಿ?


ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಯಕೋಬನು ‘ಮಾರಿರುವುದಾಗಿ ನನಗೆ ಪ್ರಮಾಣ ಮಾಡು’, ಎಂದಾಗ ಏಸಾವನು ಪ್ರಮಾಣಮಾಡಿ ತನ್ನ ಜ್ಯೇಷ್ಠತನದ ಹಕ್ಕನ್ನು ಮಾರಿಬಿಟ್ಟ.


"ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”


ಯಕೋಬನು ತಂದೆ ಇಸಾಕನಿಂದ ಆಶೀರ್ವಾದ ಪಡೆದು ಹೊರಟುಹೋದನು. ಕೂಡಲೆ ಅವನ ಅಣ್ಣ ಏಸಾವನು ಬೇಟೆಯಿಂದ ಹಿಂದಿರುಗಿ ಬಂದನು.


ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”


ಈ ಕನಸನ್ನು ಅಣ್ಣಂದಿರಿಗೆ ಮಾತ್ರವಲ್ಲ, ತಂದೆಗೂ ತಿಳಿಸಿದ. ತಂದೆ ಅವನಿಗೆ, “ಇದೆಂಥ ಕನಸು, ನೀನು ಕಂಡದ್ದು! ನಾನು, ನಿನ್ನ ತಾಯಿ, ಹಾಗು ಅಣ್ಣತಮ್ಮಂದಿರು ನಿನಗೆ ಅಡ್ಡಬೀಳಲು ಬರುತ್ತೇವೋ” ಎಂದು ಹೇಳಿ ಅವನನ್ನು ಗದರಿಸಿದ.


ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.


ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು