Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:33 - ಕನ್ನಡ ಸತ್ಯವೇದವು C.L. Bible (BSI)

33 ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ - ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವದಕ್ಕಿಂತ ಮುಂಚೆ ಅವನು ತಂದದ್ದರಲ್ಲಿ ನಾನು ಊಟ ಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:33
14 ತಿಳಿವುಗಳ ಹೋಲಿಕೆ  

ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ವಿಶ್ವಾಸವಿದ್ದುದರಿಂದಲೇ ಇಸಾಕನು ಸಹ ಮುಂದೆ ಸಂಭವಿಸಬೇಕಾದ್ದನ್ನು ಸೂಚಿಸಿ, ಯಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II


“ಇದನ್ನು ನೋಡಿದಾಗ ನನ್ನ ಎದೆ ತತ್ತರಗೊಳ್ಳುತ್ತದೆ. ನನ್ನ ಗುಂಡಿಗೆ ಎದೆಬಿಟ್ಟು ಮಿಡಿಯುತ್ತದೆ.


ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು.


ಆಗ ಇಸಾಕನು ಯಕೋಬನನ್ನು ಕರೆದು, “ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;


ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು