Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:35 - ಕನ್ನಡ ಸತ್ಯವೇದವು C.L. Bible (BSI)

35 ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇಸಾಕನು - ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡಕೊಂಡನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಇಸಾಕನು, “ನಿನ್ನ ತಮ್ಮನು ನನ್ನನ್ನು ಮೋಸಗೊಳಿಸಿದನು; ಅವನು ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇಸಾಕನು, “ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:35
10 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.


ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಆ ಹೆಣ್ಣು ಲೇಯಳೆಂದು ಯಕೋಬನಿಗೆ ಬೆಳಿಗ್ಗೆ ತಿಳಿಯಿತು. ಅವನು ಲಾಬಾನನಿಗೆ, “ನೀವು ನನಗೇಕೆ ಹೀಗೆ ಮಾಡಿದಿರಿ? ರಾಖೇಲಳಿಗಾಗಿ ಅಲ್ಲವೆ ನಾನು ನಿಮಗೆ ಸೇವೆಮಾಡಿದ್ದು? ನನಗೆ ಮೋಸಮಾಡಿದ್ದೇಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು