Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:39 - ಕನ್ನಡ ಸತ್ಯವೇದವು C.L. Bible (BSI)

39 ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಎಂದು ಹೇಳಿ ಗೋಳಾಡುತ್ತಾ ಅಳಲು ಅವನ ತಂದೆಯಾದ ಇಸಾಕನು ಅವನಿಗೆ - ಸಾರವುಳ್ಳ ಭೂವಿುಯೂ ಮೇಲಿನಿಂದ ಬೀಳುವ ಆಕಾಶದ ಮಂಜೂ ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಅವನ ತಂದೆ ಇಸಾಕನು ಉತ್ತರವಾಗಿ ಅವನಿಗೆ ಹೀಗೆ ಹೇಳಿದನು, “ನಿನ್ನ ನಿವಾಸವು ಭೂಮಿಯ ಐಶ್ವರ್ಯದಿಂದಲೂ ಮೇಲಿನ ಆಕಾಶದಿಂದ ಬೀಳುವ ಮಂಜಿನಿಂದಲೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:39
8 ತಿಳಿವುಗಳ ಹೋಲಿಕೆ  

ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.


ವಿಶ್ವಾಸವಿದ್ದುದರಿಂದಲೇ ಇಸಾಕನು ಸಹ ಮುಂದೆ ಸಂಭವಿಸಬೇಕಾದ್ದನ್ನು ಸೂಚಿಸಿ, ಯಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ಏಸಾವನು, “ತಮ್ಮಾ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ,” ಎಂದನು.


ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು