Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:40 - ಕನ್ನಡ ಸತ್ಯವೇದವು C.L. Bible (BSI)

40 ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:40
17 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ಮೋವಾಬ್ ಪ್ರಾಂತ್ಯವು ನನ್ನ ಸ್ನಾನ ಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು!” II


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.


ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ಮರಳಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಗೊಯ್ದಿದ್ದರು.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


“ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಏಸಾವನು, “ತಮ್ಮಾ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು