Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:41 - ಕನ್ನಡ ಸತ್ಯವೇದವು C.L. Bible (BSI)

41 ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:41
34 ತಿಳಿವುಗಳ ಹೋಲಿಕೆ  

ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II


ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ, ಜೆರುಸಲೇಮಿಗೆ ತೆಗೆದುಕೊಂಡು ಹೋದರು. ಅಲ್ಲಿ ಅವನು ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಎಲ್ಲ ಯೆಹೂದ್ಯರೂ ಜೆರುಸಲೇಮಿನವರೂ ಯೋಷೀಯನ ಮರಣಕ್ಕಾಗಿ ಶೋಕಿಸಿದರು.


ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ.


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು.


ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.


ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು