ಆದಿಕಾಂಡ 27:42 - ಕನ್ನಡ ಸತ್ಯವೇದವು C.L. Bible (BSI)42 ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹಿರೀ ಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೆದು ಅವನಿಗೆ - ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದು ಯೋಚಿಸಿ ತನ್ನ ಹೊಟ್ಟೆಯ ಉರಿಯನ್ನು ಆರಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ. ಅಧ್ಯಾಯವನ್ನು ನೋಡಿ |