ಆದಿಕಾಂಡ 27:7 - ಕನ್ನಡ ಸತ್ಯವೇದವು C.L. Bible (BSI)7 ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ, ಅದರಿಂದ ನನಗೆ ಸವಿ ಊಟವನ್ನು ಅಣಿಮಾಡಿ ಬಡಿಸು; ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮನಸಾರೆ ಆಶೀರ್ವದಿಸುತ್ತೇನೆ,’ ಎಂದು ಹೇಳಿದ್ದನ್ನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ಹೋಗಿ ಬೇಟೆಯಾಡಿ ಬೇಟೇ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆಂದು ಹೇಳುವದನ್ನು ಕೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ತಂದೆ ಅವನಿಗೆ, ‘ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ‘ನನಗೋಸ್ಕರ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಂದು, ನಾನು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ, ಆಗ ನಾನು ಸಾಯುವುದಕ್ಕಿಂತ ಮುಂಚೆ ಊಟಮಾಡಿ, ಯೆಹೋವ ದೇವರ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸುವೆನು,’ ಎಂದು ಹೇಳಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |