Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:11 - ಕನ್ನಡ ಸತ್ಯವೇದವು C.L. Bible (BSI)

11 ಪ್ರಯಾಣಮಾಡುತ್ತಾ ಅವನು ಒಂದು ಸ್ಥಳಕ್ಕೆ ಬಂದು ಸೇರಿದನು. ಹೊತ್ತು ಮುಳುಗಿದ್ದ ಕಾರಣ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲೇ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಹೋಗುತ್ತಿರಲು ಒಂದು ಸ್ಥಳಕ್ಕೆ ಸೇರಿದಾಗ ಹೊತ್ತು ಮುಣುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆಗಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:11
6 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.


ಅದಲ್ಲದೆ, ತನ್ನ ಕಡೆಯವರಿಗೆ, “ಕಲ್ಲುಗಳನ್ನು ಒಟ್ಟುಗೂಡಿಸಿರಿ,” ಎನ್ನಲು, ಅವರು ಕಲ್ಲುಗಳನ್ನು ತಂದು ಒಂದು ಕುಪ್ಪೆ ಮಾಡಿದರು; ಅದರ ಬಳಿಯಲ್ಲೆ ಕುಳಿತು ಸಹಭೋಜನ ಮಾಡಿದರು.


ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು