Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:12 - ಕನ್ನಡ ಸತ್ಯವೇದವು C.L. Bible (BSI)

12 ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:12
24 ತಿಳಿವುಗಳ ಹೋಲಿಕೆ  

ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಬಳಿಕ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಕೂಡಲೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟಮಾಡು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು