Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:16 - ಕನ್ನಡ ಸತ್ಯವೇದವು C.L. Bible (BSI)

16 ಯಕೋಬನು ನಿದ್ರೆಯಿಂದ ಎಚ್ಚೆತ್ತನು. "ನಿಶ್ಚಯವಾಗಿ ಸರ್ವೇಶ್ವರ ಈ ಸ್ಥಳದಲ್ಲಿದ್ದಾರೆ; ಇದು ನನಗೆ ತಿಳಿಯದೆಹೋಯಿತು!” ಎಂದುಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕೋಬನು ನಿದ್ದೆಯಿಂದ ಎಚ್ಚತ್ತು - ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:16
14 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.


ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.


ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು.


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II


‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು