Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:4 - ಕನ್ನಡ ಸತ್ಯವೇದವು C.L. Bible (BSI)

4 ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:4
20 ತಿಳಿವುಗಳ ಹೋಲಿಕೆ  

ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ಯಕೋಬನು ತನ್ನ ತಂದೆ ಪ್ರವಾಸಿ ಆಗಿದ್ದ ಕಾನಾನ್ ನಾಡಿನಲ್ಲಿ ವಾಸ ಆಗಿದ್ದನು. ಅವನ ಮಕ್ಕಳ ಚರಿತ್ರೆ ಇದು:


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು