Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:18 - ಕನ್ನಡ ಸತ್ಯವೇದವು C.L. Bible (BSI)

18 ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:18
11 ತಿಳಿವುಗಳ ಹೋಲಿಕೆ  

ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.


ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.


ಅಂತೆಯೇ ನಾನು ಹದಿನೈದು ಬೆಳ್ಳಿ ನಾಣ್ಯಗಳು ಮತ್ತು 150 ಕಿಲೋಗ್ರಾಂ. ಜವೆಗೋದಿಯನ್ನು ಕೊಟ್ಟು, ಅಂಥವಳನ್ನು ನನಗಾಗಿ ಕೊಂಡುಕೊಂಡೆನು.


ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.


ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.


ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು.


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಲಾಬಾನನು, “ಆಕೆಯನ್ನು ಬೇರೆ ಒಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಲೇಸು, ನನ್ನಲ್ಲೇ ತಂಗಿರು,” ಎಂದನು.


ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು